ಅಭಿಪ್ರಾಯ / ಸಲಹೆಗಳು

ಪಿಕೆಟಿಬಿ ಮತ್ತು ಸಿಡಿ ಆಸ್ಪತ್ರೆ

       ಪಿಕೆಟಿಬಿ ಮತ್ತು ಸಿಡಿ ಆಸ್ಪತ್ರೆ (ರಾಜಕುಮಾರಿ ಕೃಷ್ಣಜಮ್ಮಣಿಯವರ ಕ್ಷಯ ಮತ್ತು ಎದೆ ರೋಗಗಳ ಆಸ್ಪತ್ರೆ) ಮೈಸೂರು. ಈ ಆಸ್ಪತ್ರೆಯು ರಾಜಕುಮಾರಿ ಕೃಷ್ಣಜಮ್ಮಣಿಯವರ ನೆನಪಿನಲ್ಲಿ ದಿನಾಂಕ: 18-11-1921 ರಲ್ಲಿ ಅಂದಿನ ಮೈಸೂರು ಸಂಸ್ಥಾಪಕರಾದ ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಇವರು ಸ್ಥಾಪಿಸದ್ದು, ಅಂದಿನಿಂದ ಇಲ್ಲಿಯವರೆಗೂ, ಕರ್ನಾಟಕದ ರೋಗಿಗಳಷ್ಟೇ ಅಲ್ಲದೇ ನೆರೆಯ ರಾಜ್ಯಗಳಾದ ಕೇರಳ ಮತ್ತು ತಮಿಳುನಾಡಿನ ರೋಗಿಗಳು ಸೇರಿ ಇಲ್ಲಿಯವರೆಗೂ ಲಕ್ಷಾಂತರ ರೋಗಿಗಳು ಚಿಕಿತ್ಸೆಯನ್ನು ಪಡೆದಿರುತ್ತಾರೆ. ಈ ಆಸ್ಪತ್ರೆಯು ದಿನಾಂಕ:18-11-2021 ಗೆ 100 ವರ್ಷಗಳನ್ನು  ಪೂರೈಸಿ ಶತಮಾನೋತ್ಸವನ್ನು ಅಚರಿಸುವ ದಿಕ್ಕಿನಲ್ಲಿದೆ. ಈ ಆಸ್ಪತ್ರೆಯು  80 ಎಕರೆ ವಿಸ್ತೀರ್ಣದ ವಿಶಾಲವಾದ  ಪ್ರದೇಶದಲ್ಲಿ ಹರಡಿಕೊಂಡಿದ್ದು, ಸರ್ಕಾರದಿಂದ ಪ್ರಾರಂಭವಾದ ಇತರೆ ಆಸ್ಪತ್ರೆಯಗಳಿಗೂ ಸ್ಥಳಾವಕಾಶವನ್ನು ಈ ಆಸ್ಪತ್ರೆಯ ಆವರಣದಲ್ಲಿ ನೀಡಲಾಗಿದೆ. (ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಪಿ. ಕೆ. ಟ್ರಾಮಾಕೇರ್ ಸೆಂಟರ್ ಹಾಗೂ ಪಿ. ಕೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ). ಈ ಆಸ್ಪತ್ರೆಯು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಒಂದು ಅಂಗ ಸಂಸ್ಥೆಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇದರಲ್ಲಿ 2 ಪ್ರಮುಖ ವಿಭಾಗಗಳಿವೆ. ಅವುಗಳಲ್ಲಿ

    1. ಶ್ವಾಸಕೋಶ ಶಾಸ್ತ್ರ ವಿಭಾಗ 

    2. ಎದೆಗೂಡಿನ ಶಸ್ತ್ರ ಚಿಕಿತ್ಸಾ ವಿಭಾಗ

    ಈ ಆಸ್ಪತ್ರೆಯು ಬೋಧನಾ ಆಸ್ಪತ್ರೆಯಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಸ್ನಾತಕಪೂರ್ವ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಇಲ್ಲಿ ತರಬೇತಿ ಪಡೆದು ದೇಶ ವಿದೇಶಗಳಲ್ಲಿ ಸೇವೆ ಸಲ್ಲಿಸುತ್ತಾ ಬಂದಿರುತ್ತಾರೆ.

    

 

 

ಇತ್ತೀಚಿನ ನವೀಕರಣ​ : 09-02-2022 04:29 PM ಅನುಮೋದಕರು: superadmin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080